ಕಲಬುರಗಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಖಾಸಗಿ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದಲ್ಲಿ ಜ8 ರಂದು ರಾತ್ರಿ 7 ಗಂಟೆಗೆ ಸಂಭವಿಸಿದೆ.. ಸಿಂದಗಿ ಮೂಲದ ಡಾ ಶ್ರೀದೇವಿ ಎಂಬುವರಿಗೆ ಸೇರಿರೋ ಅನನ್ಯ ಆಸ್ಪತ್ರೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ 7-8 ಲಕ್ಷ ಮೌಲ್ಯದ ಪೀಠೋಪಕರಣಗಳು, 2-3 ಲಕ್ಷ ಮೌಲ್ಯದ ಔಷಧಿ ವಸ್ತುಗಳು ಬೆಂಕಿಗಾಹುತಿಯಾಗಿವೆ.. ಇನ್ನೂ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಬಂದು ಬೆಂಕಿ ನಂದಿಸಿದ್ದು, ಈ ಬಗ್ಗೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ