ಬಂಗಾರಪೇಟೆ: ತಾಲೂಕಿನ ತೊಪ್ಪನಹಳ್ಳಿ ಗ್ರಾಮದಲ್ಲಿ ಎರಡು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ ಸ್ಥಳದಲ್ಲೇ ಓರ್ವ ಸಾವು
ತಾಲೂಕಿನ ತೊಪ್ಪನಹಳ್ಳಿ ಗ್ರಾಮದಲ್ಲಿ ಸೋಮವಾರ ಎರಡು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಹಿನ್ನೆಲೆ ವ್ಯಕ್ತಿಯೋರ್ವ ಸ್ಥಳದಲ್ಲಿ ಸಾವನಪ್ಪಿರುವ ಘಟನೆ ನಡೆದಿದೆ.ಮೃತ ದುರ್ದೈವಿ ವೆಂಕಟರೆಡ್ಡಿ (46) ವರ್ಷ ಮೂಲತಹ ರಾತೇನಹಳ್ಳಿ ಗ್ರಾಮದವರೆಂದು ತಿಳಿದು ಬಂದಿದೆ. ಸೋಮವಾರ ತೊಪ್ಪನಹಳ್ಳಿಗೆ ಹೋಗುವ ಸಂದರ್ಭದಲ್ಲಿ ಎರಡು ದ್ವಿಚಕ್ರಗಳು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಸ್ಥಳದಲ್ಲೇ ವೆಂಕಟರೆಡ್ಡಿ ಮೃತಪಟ್ಟಿದ್ದಾರೆ.ಮತ್ತೋರ್ವ ಬೈಕ್ ಸವಾರ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾನೆ. ಸ್ಥಳಕ್ಕೆ ಕಾಮಸಮುದ್ರ ಪೊಲೀಸರು ಬೇಟಿಕೊಟ್ಟು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.