ಮೈಸೂರು: ಸಹಕಾರ ಕ್ಷೇತ್ರ ಪ್ರಗತಿಯಾದರೆ ಆರ್ಥಿಕ ಪ್ರಗತಿಗೆ ಸಾಧ್ಯ: ನಗರದಲ್ಲಿ ಶಾಸಕ ಜಿಟಿಡಿ
Mysuru, Mysuru | Sep 14, 2025 ಗ್ರಾಮಾಂತರ ಪ್ರದೇಶ ಸೇರಿದಂತೆ ಇಡೀ ದೇಶದಲ್ಲಿ ಸಹಕಾರ ಕ್ಷೇತ್ರ ಉತ್ತಮವಾಗಿ ಬೆಳೆದರೆ ಎಲ್ಲರಿಗೂ ಸಮಾನತೆ,ಆರ್ಥಿಕ ಪ್ರಗತಿಗೆ ದಾರಿಯಾಗಲಿದೆ. ಸಹಕಾರ ಕ್ಷೇತ್ರ ಸ್ವಾಯತ್ತತೆಯಿಂದ ಕೆಲಸ ಮಾಡಿದಷ್ಟು ಅಭಿವೃದ್ಧಿ ಕಂಡು ನೂರಾರುಜನರಿಗೆ ನೆರವಾಗಲು ಕಾರಣವಾಗಲಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ಬೋಗಾದಿ ರಿಂಗ್ ರಸ್ತೆಯ ಜಿ.ಎಲ್.ಎನ್.ಕನ್ವೆನ್ಷನ್ ಹಾಲ್ನಲ್ಲಿ ಆಯೋಜಸಿದ್ದ ಶ್ರೀ ಶಾರದ ಪತ್ತಿನ ಸಹಕಾರ ಸಂಘದ ರಜತ ಮಹೋತ್ಸವ ಸಮಾರಂಭದಲ್ಲಿ ಸ್ಮರಣ ಸಂಚಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.೨೫ ವರ್ಷಗಳಲ್ಲಿ ಎರಡೂವರೆ ಸಾವಿರ ಸದಸ್ಯರನ್ನು ನೋಂದಾಯಿಸಿ ಆದಾಯ ಮತ್ತು ಪ್ರಗತಿ ಸಾಧಿಸಿರುವುದು ಶ್ಲಾಘನೀಯ ಎಂದರು.