ಮಂಡ್ಯ: ಸೆ.17 ರಿಂದ ಅ.2 ರವರೆಗೆ ಗ್ರಾಮೀಣ ಸಮುದಾಯದಲ್ಲಿ ಸ್ವಚ್ಛೋತ್ಸವ – 2025: ನಗರದಲ್ಲಿ ಜಿಪಂ ಸಿಇಒ ನಂದಿನಿ ಕೆ. ಆರ್
Mandya, Mandya | Sep 16, 2025 ಜಿಲ್ಲೆಯ ಎಲ್ಲಾ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿ ಅಂಗವಾಗಿ ಸ್ವಚ್ಛತಾ ಹೀ ಸೇವಾ ಅಥವಾ ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಜನಾಂದೋಲನವನ್ನು ಹಮ್ಮಿಕೊಂಡಿದ್ದು, ಈ ಪ್ರಯುಕ್ತ ಸ್ವಚ್ಛತಾ ಹೀ ಸೇವಾ 2025 ಅಭಿಯಾನವನ್ನು ಸೆ.17 ರಿಂದ ಅ.2 ರವರೆಗೆ "ಸ್ವಚೋತ್ಸವ"ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಪ್ರತಿ ವರ್ಷ ಅ. 2ರಂದು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸುತ್ತಿದ್ದು, ಸ್ವಚ್ಛತೆಗಾಗಿ ಸ್ವಯಂ ಪ್ರೇರಣೆ ಮತ್ತು ಸಾಮೂಹಿಕ ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಂಡು ಸಮುದಾಯದಲ್ಲಿ ಸ್ವಚ್ಛತೆಯ ಆಶಯಗಳನ್ನು ಬಲಪಡಿಸಲು 2017 ರಿಂದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಆಂದೋಲನವನ್ನು ಆಚರಿಸಲಾಗುತ್ತಿದೆ ಎಂದು ಜಿಪಂ ಸಿಇಒ ತಿಳಿಸಿದ್ದಾರೆ.