ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಗ್ರಾಮದ ಗೇಟ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಚಾಮರಾಜನಗರ ಕಡೆಯಿಂದ ಗುಂಡ್ಲುಪೇಟೆ ಕಡೆಗೆ ಹೋಗುತ್ತಿದ್ದ ಸ್ಪೀಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಇನ್ನೂ ಕಾರಿನಲ್ಲಿದ್ದ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ