ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾರನ್ನು ದೆಹಲಿಯಲ್ಲಿ ಶನಿವಾರ ಬೆಳಿಗ್ಗೆ 9 ಗಂಟೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ಮಾಡಿ ಮಂಗನ ಕಾಯಿಲೆಗೆ ಶಾಶ್ವತ ಪರಿಹಾರಕ್ಕಾಗಿ ಒತ್ತಾಯಿಸಿದರು. ಮಲೆನಾಡು ಪ್ರದೇಶದ ರೈತರು, ಅರಣ್ಯವಾಸಿಗಳು ಹಾಗೂ ಗ್ರಾಮೀಣ ಜನರು ಹಲವು ವರ್ಷಗಳಿಂದ ಎದುರಿಸುತ್ತಿರುವ ಮಂಗನ ಕಾಯಿಲೆ ಎಂಬ ಗಂಭೀರ ಕಾಯಿಲೆಗೆ ಶಾಶ್ವತ ಮತ್ತು ವೈಜ್ಞಾನಿಕ ಪರಿಹಾರ ದೊರಕಿಸಿಕೊಡಬೇಕೆಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಸಂಸದರು ಚರ್ಚೆ ನಡೆಸಿದರು. ಮಂಗನ ಕಾಯಿಲೆಯಿಂದ ಆಗುತ್ತಿರುವ ಜೀವ ಹಾನಿ ಹಾಗೂ ಜನಜೀವನದ ಮೇಲೆ ಬೀರುವ ಪರಿಣಾಮವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು