ಬಾವನ ಸವದತ್ತಿ ಗ್ರಾಮದಲ್ಲಿ ಕೆರೆ ತುಂಬಿಸುವ ಯೋಜನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ. ರಾಯಬಾಗ ತಾಲೂಕಿನ ಬಾವನ ಸವದತ್ತಿ ಗ್ರಾಮದಲ್ಲಿ ಕೆರೆ ತುಂಬಿಸುವ ಯೋಜನೆಗೆ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು. ಸುಮಾರು 7 ವರ್ಷದಿಂದ ಕಾಮಗಾರಿ ಆರಂಭಗೊಂಡಿದ್ದು, ಇಂದು ಪೂರ್ಣಗೊಂಡಿದ್ದು, ನೀರು ತುಂಬಿಸುವ ಯೋಜನೆಗೆ ಸಾಂಕೇತಿಕವಾಗಿ ಚಾಲನೆ ನೀಡಲಾಗಿದ್ದು, ಮುಂದೆ ಸಿಎಂ ಮತ್ತು ಸಂಬಂಧಿಸಿದ ಸಚಿವರ ಉಪಸ್ಥಿತಿಯಲ್ಲಿ ಲೋಕಾರ್ಪಣೆ ಗೊಳಿಸಲಾಗುವುದು. ಎಂದು ಹೇಳಿದರು