ತೀರ್ಥಹಳ್ಳಿ: ಲಕ್ಷ್ಮಿಪುರ ಗ್ರಾಮದಲ್ಲಿ ಅಡಿಕೆ ಗೊನೆ ಕೊಯ್ಯುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸ್ಥಳದಲ್ಲೇ ಸಾವು
ಅಡಿಕೆ ಗೊನೆ ಕೊಯ್ಯುವಾಗ ವಿದ್ಯುತ್ ಪ್ರವಹಿಸಿ ಕೃಷಿ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಬಸವಾನಿ ಸಮೀಪದ ಲಕ್ಷ್ಮಿಪುರ ಗ್ರಾಮದಲ್ಲಿ ಭಾನುವಾರ ಸಂಜೆ 4 ಗಂಟೆಗೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ದೋರಗಲ್ಲು ಗ್ರಾಮದ ಸತೀಶ್ (50) ಮೃತ ದುರ್ದೈವಿ. ಅಡಿಕೆ ಗೊನೆ ಕೊಯ್ಯುವಾಗ ಆಕಸ್ಮಿಕವಾಗಿ ದೋಟಿ ವಿದ್ಯುತ್ ತಂತಿಗೆ ತಗುಲಿ ಸತೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರೈತ ಸುಂದರೇಶ್ ಅವರಿಗೆ ಸೇರಿದ ಅಡಿಕೆ ತೋಟದಲ್ಲಿ ಈ ಘಟನೆ ನಡೆದಿದೆ.