ದಾಂಡೇಲಿ : ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮೊಬೈಲ್ ಕಳೆದು ಹೋಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ಕೆಲ ದಿನಗಳ ಹಿಂದೆ ದಾಖಲಾಗಿದ್ದ ದೂರಿಗೆ ಸಂಬಂಧಿಸಿದಂತೆ ಸಿಪಿಐ ಜೈಪಾಲ್ ಪಾಟೀಲ್ ಮಾರ್ಗದರ್ಶನದಲ್ಲಿ ಪಿಎಸ್ಐ ಅವರ ನೇತೃತ್ವದಲ್ಲಿ ತನಿಖೆಗಿಳಿದ ಪೊಲೀಸರು ಕಳೆದು ಹೋಗಿದ್ದ ಮೊಬೈಲನ್ನು ಪತ್ತೆ ಹಚ್ಚಿ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ವಾರಿಸುದಾರರಿಗೆ ಒಪ್ಪಿಸುವ ಮೂಲಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಸಿಪಿಐ ಜೈಪಾಲ್ ಪಾಟೀಲ್ ಅವರು ಹಾಗೂ ಪೊಲೀಸ್ ಸಿಬ್ಬಂದಿ ಮೊಬೈಲನ್ನು ಸಂಬಂಧಿಸಿದ ವಾರಿಸುಗಾರರಿಗೆ ಹಸ್ತಾಂತರಿಸಿದರು. ಈ ಬಗ್ಗೆ ಗುರುವಾರ ಸಂಜೆ 5:30 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ