ತರೀಕೆರೆ: ಕ್ಷೇತ್ರದ ಅಭಿವೃದ್ಧಿಗೆ ಸದಾ ಬದ್ಧ : ಪಟ್ಟಣದಲ್ಲಿ ಶಾಸಕ ಶ್ರೀನಿವಾಸ್ ಹೇಳಿಕೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಪುರಸಭೆ ವಾರ್ಡ್ ಸಂಖ್ಯೆ 17 ರಲ್ಲಿನ ಖಾಜಿ ಬೀದಿಯಿಂದ ಹಜ್ರತ್ ಸಲಾವುದ್ದೀನ್ ಷಾ ಖಾದ್ರಿ ದರ್ಗಾದವರೆಗೆ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸ್ ಶಂಕುಸ್ಥಾಪನೆ ಮಾಡಿದರು 17 ಲಕ್ಷ ರೂ. ವೆಚ್ಚದಲ್ಲಿ ಈ ಸಿಸಿ ರಸ್ತೆಯ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು. ಸದಾ ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಬದ್ಧನಿದ್ದೇನೆ ಎಂದು ಶಾಸಕ ಶ್ರೀನಿವಾಸ್ ವಿಶ್ವಾಸ ವ್ಯಕ್ತಪಡಿಸಿದರು.