ಹುಬ್ಬಳ್ಳಿ: ಮುಂದಿನ ೧೦ ದಿನಗಳಲ್ಲಿ ಹುಧಾ ಅವಳಿನಗರದಲ್ಲಿ ಧೂಳು ನಿಯಂತ್ರಣ ಮಾಡದಿದ್ದರೆ ಹುಬ್ಬಳ್ಳಿ ಪಾಲಿಕೆ ಕಛೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣಕುಮಾರ್ ಶೆಟ್ಟಿ ಬಣದ ಧಾರವಾಡ ಜಿಲ್ಲಾಧ್ಯಕ್ಷರಾದ ಮಂಜುನಾಥ ಲೂತಿಮಠ ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಳಿನಗರದಲ್ಲಿ ಧೂಳು ಹೆಚ್ಚಿನ ಪ್ರಮಾಣದಲ್ಲಿ ಆವರಸಿದ್ದು ಉಸಿರಾಟದ ತೊಂದರೆ, ಅಸ್ತಮಾ, ಅಲರ್ಜಿ, ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿದ್ದು, ಇದರಿಂದಾಗಿ ಸಾರ್ವಜನಿಕರು ಸಂಚಾರ ಮಾಡುವುದು ದುಸ್ಥರವಾಗಿದೆ. ಈ ನಿಟ್ಟಿನಲ್ಲಿ ಹುಧಾಮಪಾ ಆಯುಕ್ತರು ಧೂಳು ನಿಯಂತ್ರಣ ಮಾಡಲು ವಿಫಲರಾಗಿದ್ದಾರೆ. ಹೀಗಾಗಿ ಧೂಳು ನಿಯಂತ್ರಣ ಮಾಡದಿದ್ದರೆ ಪ್ರತಿಭಟನೆ ಅನಿವಾರ್ಯ ಎಂದು ಅವರು