ಕುಂದಗೋಳ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಗುರುವಾರ ಮಧ್ಯಾಹ್ನ 3 ಗಂಟೆಗೆ ಶಾಸಕ ಎಂ.ಆರ್ ಪಾಟೀಲ್ ಪರಿಶೀಲನೆ ನಡೆಸಿದರು. ಕುಂದಗೋಳ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಕಟ್ಟಡ ದುರಸ್ತಿ ಕಾಮಗಾರಿಗಳನ್ನು ವೀಕ್ಷಿಸಿದರು. ಅದರಂತೆಯೇ ಆದಷ್ಟು ಶೀಘ್ರವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಿದರು.