ಬಸವನ ಬಾಗೇವಾಡಿ: ಪಟ್ಟಣದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದ 31ನೇ ವಾರ್ಷಿಕ ಸಭೆ ಉದ್ಘಾಟಿಸಿದ ಸಚಿವ ಶಿವಾನಂದ ಪಾಟೀಲ್
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಬಸವ ಭವನದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರ ಮೂವತ್ತೊಂದನೆಯ ವಾರ್ಷಿಕ ಸಭೆಯನ್ನು ಭಾನುವಾರ ಸಾಯಂಕಾಲ 5ಗಂಟೆ ಸುಮಾರಿಗೆ ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಉದ್ಘಾಟಿಸಿದರು. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣವು ಶರಣರು ನಡೆದಾಡಿದ ಪುಣ್ಯಕ್ಷೇತ್ರವಾಗಿದೆ ಈ ಭಾಗದಲ್ಲಿ ಶರಣ ಸಾಹಿತ್ಯಕ್ಕೆ ಹೆಚ್ಚಿನ ಒಲವು ನೀಡಲು ಕೆಲಸ ಮಾಡುತ್ತೇನೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಬಸವ ತತ್ವ ಅನುವಾಯಿಗಳು ಮಠಾಧೀಶರು ಕಾರ್ಯಕ್ರಮ ಭಾಗಿಯಾಗಿದ್ದರು.