ವಾರದ ದಿನಗಳಲ್ಲಿ ಖಾಸಗಿ ಕಾಲೇಜಿನಲ್ಲಿ ಕನ್ನಡ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದ ರೇವತಿ ಎಂಬ ಮಹಿಳೆ, ವೀಕೆಂಡ್ಗಳಲ್ಲಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ನ. 25ರಂದು ಬಸವನಗುಡಿಯ ದ್ವಾರಕಾನಾಥ್ ಕಲ್ಯಾಣ ಮಂಟಪದಲ್ಲಿ ಮದುವೆ ಮನೆಯಲ್ಲಿ ಚಿನ್ನಾಭರಣ ಕದ್ದು ಪರಾರಿಯಾಗಿದ್ದಳು. ದೂರು ದಾಖಲಾದ ನಂತರ, ಬಸವನಗುಡಿ ಪೊಲೀಸರು ಸಿಸಿಟಿವಿ ಫೂಟೇಜ್ ಪರಿಶೀಲಿಸಿ ರೇವತಿಯನ್ನು ಮಂಗಳವಾರ ಬಂಧಿಸಿದ್ದಾರೆ. ವಿಚಾರಣೆ ವೇಳೆ ಆಕೆಯ ಕೃತ್ಯ ಬಯಲಾಗಿದೆ. ಪೊಲೀಸರು 262 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.