ಲಕ್ಷ್ಮೇಶ್ವರ: ಪಟ್ಟಣದಲ್ಲಿ ಧಾರವಾಡದ ಕೃಷಿ ಮೇಳ ಅಧ್ಯಯನ ಪ್ರವಾಸದ ವಾಹನಕ್ಕೆ ಶಾಸಕ ಡಾ. ಚಂದ್ರು ಲಮಾಣಿ ಚಾಲನೆ
ಲಕ್ಷ್ಮೇಶ್ವರ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಂಜೀವಿನಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಜಿಲ್ಲಾ ಪಂಚಾಯತ್ ಗದಗ ತಾಲೂಕ ಪಂಚಾಯತ್ ಲಕ್ಷ್ಮೇಶ್ವರ ಕೃಷಿ ಜೀವನೋಪಾಯ ವಿಭಾಗದ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಹಾಗೂ ಐಎಫ್ ಸಿ ಮಹಿಳಾ ಕಿಸಾನ್ ಸದಸ್ಯರುಗಳಿಗೆ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿರುವ ಕೃಷಿ ಮೇಳ ಧಾರವಾಡ-2025 ಅಧ್ಯಯನ ಪ್ರವಾಸಕ್ಕೆ ಶಾಸಕ ಡಾ. ಚಂದ್ರು ಲಮಾಣಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.