ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಅನುಮತಿ ವಿರೋಧಿಸಿ ನಗರದಲ್ಲಿ ಪ್ರತಿಭಟನೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ಬಳಸಲು ಅನುಮತಿ ನೀಡಿರುವುದನ್ನು ಖಂಡಿಸಿ, ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಜ್ಯ ಸರ್ಕಾರದ ವಿರುದ್ಧ ಮಂಗಳವಾರ ವಿಶ್ವ ಹಿಂದೂ ಪರಿಷದ್, ಬಜರಂಗದಳ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದರು. ಹಿಂದೂ ಹಬ್ಬಗಳಿಗೆ ಡಿಜೆ ಅನುಮತಿ ನೀಡದೆ ಈದ್ ಮಿಲಾದ್ ಮೆರವಣಿಗೆ ಅನುಮತಿ ನೀಡಿದ್ದಾರೆಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಆಡಳಿತ ಪೊಲೀಸ್ ಇಲಾಖೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ದೇಶದ್ರೋಹಿ ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದರು.