ಬೆಂಗಳೂರು ಉತ್ತರ: ಧರ್ಮಸ್ಥಳ ಪ್ರಕರಣದಲ್ಲಿ ಧರ್ಮಾಧಿಕಾರಿಗಳ ವಿರುದ್ಧ ಷಡ್ಯಂತ್ರ: ನಗರದಲ್ಲಿ ಎಂಎಲ್‌ಸಿ ಸಿ.ಟಿ ರವಿ
ತಿಮ್ಮರೋಡಿ ನಿರಂತರ ಆರೋಪ ವಿಚಾರಕ್ಕೆ ಸಂಬಂಧಿಸಿ ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರು, ನಾನು ವ್ಯಕ್ತಿಗತವಾಗಿ ಟಾರ್ಗೆಟ್ ಮಾಡುವುದಿಲ್ಲ. ಉದ್ದೇಶ ಪೂರ್ವಕವಾಗಿ ದಿಕ್ಕು ತಪ್ಪಿಸಲಾಗುತ್ತಿದೆ. ಈ ಪ್ರಕರಣದಲ್ಲಿ ಹಲವು ಘಜನಿಗಳು ಇದ್ದಾರೆ.ಅವರು ತಿಮ್ಮರೋಡಿ, ಗಿರೀಶ್ ಅವರನ್ನು ಟೂಲ್ ಆಗಿ ಬಳಸುತ್ತಿದ್ದಾರೆ. ಇಲ್ಲೂ ಕೂಡ ಮಲ್ಲಪ್ಪಶೆಟ್ಟಿ, ಚನ್ನಪ್ಪ ಶೆಟ್ಟಿ ಇದ್ದಾರೆ. ಇದರ ಹಿಂದೆ ಬೇರೆಯದ್ದೇ ಫೋರ್ಸ್ ಇದೆ. ಧರ್ಮಾಧಿಕಾರಿಗಳ ವಿರುದ್ಧ ಷಡ್ಯಂತ ಮಾಡ್ತಾರೆ ಅಂದ್ರೆ ಬೇರೆಯವರು ಸುಲಭದ ತುತ್ತು. ಸರಕಾರ ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.