ಧಾರವಾಡ: ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಿ: ನಗರದಲ್ಲಿ ಸಚಿವ ಸಂತೋಷ್ ಲಾಡ್
ಸರ್ಕಾರದಿಂದ ಬಿಡುಗಡೆ ಆಗುವ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್  ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ ನಡೆದ ಧಾರವಾಡ ಜಿಲ್ಲಾ ಎರಡನೇ ಕೆಡಿಪಿ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಸೂಕ್ತ ಅನುದಾನವನ್ನು ನೀಡಿದೆ. ಅಧಿಕಾರಿಗಳು ಅದನ್ನ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.