ಬೆಂಗಳೂರು ಉತ್ತರ: ಸಿದ್ದರಾಮಯ್ಯ ಸಮ್ಮುಖದಲ್ಲಿ ಆರಂಭವಾದ ‘ಬೆಂಗಳೂರು ಕೌಶಲ್ಯ ಶೃಂಗಸಭೆ 2025’
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ “ಬೆಂಗಳೂರು ಕೌಶಲ್ಯ ಶೃಂಗಸಭೆ (Bengaluru Skill Summit 2025)” ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿದರು. ನಮ್ಮ ಸರ್ಕಾರ ಇದೇ ಮೊದಲ ಬಾರಿಗೆ ಇಂದಿನಿಂದ ನವೆಂಬರ್ 6ರವರೆಗೆ ರಾಜ್ಯವ್ಯಾಪಿ ಕೌಶಲ್ಯ ಶೃಂಗಸಭೆಯನ್ನು ಆಯೋಜಿಸಿದೆ. ರಾಜ್ಯದ ಯುವಜನರ ಕೌಶಲ್ಯ ಅಭಿವೃದ್ಧಿ, ಉದ್ಯೋಗಾವಕಾಶಗಳನ್ನು ವಿಸ್ತರಿಸುವುದು ಹಾಗೂ ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಮಾನವ ಸಂಪನ್ಮೂಲವನ್ನು ಸಿದ್ಧಗೊಳಿಸುವುದು ಈ ಶೃಂಗಸಭೆಯ ಪ್ರಮುಖ ಉದ್ದೇಶವಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು.