ಕೊಳ್ಳೇಗಾಲ ಪಟ್ಟಣದ ಉಪವಿಭಾಗ ಸರ್ಕಾರಿ ಆಸ್ಪತ್ರೆಯಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಮಕ್ಕಳಿಗೆ ಲಸಿಕೆ ಹಾಕಿದರು . ಬಳಿಕ ಶಾಸಕರು ಮಾತನಾಡಿ, ಎಲ್ಲಾ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಬೇಕು. ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು. ಪೋಲಿಯೊ ಒಂದು ಭಯಾನಕ ರೋಗ, ಈ ರೋಗ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆಯನ್ನು ಉಂಟುಮಾಡುತ್ತದೆ ಎಂದು ಹೇಳಿದರು. ಪೋಷಕರು ಹಾಗೂ ಸಮುದಾಯವು ಯಾವುದೇ ಆತಂಕಕ್ಕೆ ಒಳಗಾಗದೇ ತಮ್ಮ 5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಲಸಿಕಾ ಕೇಂದ್ರಕ್ಕೆ ತಪ್ಪದೇ ಕರೆದೊಯ್ದು ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು. ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ, ಆರೋಗ್ಯ ಇಲಾಖೆ ಉಪನಿರ್ದೆಶಕ ಡಾ.ಪ್ರಭುದೇವ ಗೌಡ ಇತರರು ಇದ್ದರು.