ಧಾರವಾಡ: ಫೇಸ್ಬುಕ್ನಲ್ಲಿ ಪರಿಚಯವಾದ ಮಹಿಳೆಯೊಬ್ಬರು ಧಾರವಾಡದ ವಿನಯ ಅವರಿಂದ ₹12.76 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯು ತಾನು ವಿದೇಶದಿಂದ ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದಿದ್ದು, ₹95 ಲಕ್ಷದ ಟ್ರಾವಲಿಂಗ್ ಚೆಕ್ ಇದೆ. ಕಸ್ಟಮ್ಸ್ ಅಧಿಕಾರಿಗಳು ಅದಕ್ಕೆ ಅನುಮತಿ ನೀಡುತ್ತಿಲ್ಲ, ನಗದು ಹಣ ನೀಡಿದರೆ ಬಿಡುತ್ತಾರೆ ಎಂದು ನಂಬಿಸಿ ವಿನಯ ಅವರಿಂದ ಹಣ ಪಡೆದು ವಂಚಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.