ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಯುವಕ ಆತ್ಮಹತ್ಯೆ: ಆತ್ಮಹತ್ಯಾ ವಿಡಿಯೋ ವೈರಲ್
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಯುವಕನೋರ್ವ ನೇಣು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವಿಡಿಯೋ ಬುಧವಾರ ವೈರಲ್ ಆಗಿದೆ. ನ್ಯಾಮತಿ ತಾಲೂಕಿನ ಸುರಹೊನ್ನೇ ಗ್ರಾಮದ 28 ವರ್ಷದ ಆಕಾಶ್ ಆತ್ಮಹತ್ಯೆಗೆ ಶರಣಾದ ಯುವಕ ಎಂದು ತಿಳಿದುಬಂದಿದ್ದು ಆಕಾಶ್ ತಾಯಿಯನ್ನು ನೋಡಿಕೊಳ್ಳಲು ಮೆಗ್ಗಾನ್ ಆಸ್ಪತ್ರೆಗೆ ಮಂಗಳವಾರ ಆಕಾಶ್ ಆತ್ಮಹತ್ಯೆ ಮಾಡಿಕೊಂಡಿದ್ದು,ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಯುವಕ ಆತ್ಮಹತ್ಯೆ ಮಾಡಿಕೊಳ್ಳುವ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈಗ ಎಲ್ಲೇಡೆ ವೈರಲ್ ಆಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.