ಭಟ್ಕಳ : ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಜಾಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಬುಧವಾರ ಮಧ್ಯಾಹ್ನ 3:00 ಗಂಟೆ ಸುಮಾರಿಗೆ ಭೇಟಿ ನೀಡಿದರು. ಠಾಣೆಗೆ ಭೇಟಿ ನೀಡಿದ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಆತ್ಮೀಯವಾಗಿ ಬರಮಾಡಿಕೊಂಡು ಪೊಲೀಸ್ ಠಾಣೆಯ ದೈನಂದಿನ ಕರ್ತವ್ಯ, ಮಕ್ಕಳ ಕಾಯ್ದೆಗಳು, ಪೋಕ್ಸೋ ಕಾಯ್ದೆ, ಸೈಬರ್ ಕ್ರೈಂ ಮತ್ತು ಮಾದಕ ದ್ರವ್ಯದ ದುಷ್ಪರಿಣಾಮಗಳ ಬಗ್ಗೆ ಹಾಗೂ ಪೊಲೀಸ್ ಸಹಾಯವಾಣಿಗಳ ಕುರಿತಂತೆ ತಿಳಿಸಿ ಅರಿವು ಮೂಡಿಸಿದರು.