ಶಹಾಬಾದ: ಮುತ್ತಗಾ ಗ್ರಾಮದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿ ಧ್ವಂಸ
ಕಲಬುರಗಿ : ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ.. ಗ್ರಾಮದಲ್ಲಿನ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನ ಮಾಡಿದ್ದು, ಅ10 ರಂದು ಬೆಳಗ್ಗೆ 11 ಗಂಟೆಗೆ ಮಾಹಿತಿ ಲಭ್ಯವಾಗಿದೆ.. ಮೂರ್ತಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿ ಕೈ ಮುರಿದಿದ್ದಾರೆ.. ಸದ್ಯ ಘಟನೆ ಬಳಿಕ ಗ್ರಾಮದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದ್ದು, ಅಹಿತಕರ ಘಟನೆಗಳು ಜರುಗದಂತೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.. ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ