ಶಿವಮೊಗ್ಗ: ಸಿ.ಟಿ.ರವಿ ನಾಲಿಗೆಯನ್ನು ಹಿಡಿತದಲ್ಲಿಟ್ಟುಕೊಂಡು ಮಾತನಾಡಲಿ, ಶಿವಮೊಗ್ಗದಲ್ಲಿ ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ
ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹಿರಿಯ ಕಾಂಗ್ರೆಸ್ ಮುಖಂಡರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ. ಅವರು ತಮ್ಮ ನಾಲಿಗೆಯನ್ನು ಹಿಡಿತದಲ್ಲಿಟ್ಟು ಕೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯದರ್ಶಿ ಕೆ. ದೇವೇಂದ್ರಪ್ಪ ಹೇಳಿದರು. ಬುಧವಾರ ಸಂಜೆ 5 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮದ್ದೂರಿನಲ್ಲಿ ಗಣಪತಿ ಮೆರವಣಿಗೆಯಲ್ಲಿ ಅಹಿತಕರ ಘಟನೆ ನಡೆದ ಮೇಲೆ ಸಾರ್ವಜನಿಕ ಸಭೆಗಳಲ್ಲಿ ಹಿಂದೂಗಳ ವಿಚಾರಕ್ಕೆ ಬಂದರೆ ಕೈಕಾಲು ಕಡಿಯುತ್ತೇವೆ ಎನ್ನುವುದಲ್ಲದೆ, ಕಾಂಗ್ರೆಸ್ ಮುಖಂಡರಿಗೆ ಅಶ್ಲೀಲವಾಗಿ ಮಾತನಾಡಿದ್ದಾರೆ. ಮುಖ್ಯ ಮಂತ್ರಿಗಳಿಗೂ ಕೂಡ ಅವಹೇಳನ ಕಾರಿಯಾಗಿ ಮಾತನಾಡಿದ್ದಾರೆ.