ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ. ಅನಾಮಧೇಯ ಮೇಲ್ ಮೂಲಕ ಬಾಂಬ್ ಬೆದರಿಕೆ. ಕೋಲಾರ ಹೊರವಲಯದಲ್ಲಿರುವ ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಶುಕ್ರವಾರ ಅನಾಮಧೇಯ ಮೇಲ್ ಮೂಲಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಮಾಹಿತಿ ಬಂದ ಹಿನ್ನೆಲೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಸ್ಧಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ಪತ್ತೆ ಕಾರ್ಯ ನಡೆಸುತ್ತಿದ್ದಾರೆ.