ಬೀದರ್: ಕನ್ನಡ ರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸೋಣ ; ನಗರದಲ್ಲಿ ಡಿಸಿ ಶರ್ಮಾ
Bidar, Bidar | Oct 16, 2025 ಬೀದರ್ : ಜಿಲ್ಲೆಯಲ್ಲಿ ನವೆಂಬರ್.1 ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ಮಧ್ಯಾಹ್ನ 1 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನವೆಂಬರ್.1 ರ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.