ಹಾಸನ: ಸಂಬಳ ಹೆಚ್ಚಳ, ಖಾಯಂ ನೇಮಕಕ್ಕೆ ಆಗ್ರಹ: ನಗರದ ಪ್ರಿಕಾಟ್ ಲಿಮಿಟೆಡ್ ಕಂಪೆನಿ ಮುಂದೆ ಕಾರ್ಮಿಕರ ಪ್ರತಿಭಟನೆ
Hassan, Hassan | Oct 5, 2025 ಹಾಸನ: ಕಳೆದ ೧೪ ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಹಾಸನ ನಗರದ ಹೊರವಲಯ ಕೈಗಾರಿಕಾ ಪ್ರದೇಶದಲ್ಲಿನ ಪ್ರಿಕಾಟ್ ಲಿಮಿಟೆಡ್ ಸಂಸ್ಥೆಯ ಗುತ್ತಿಗೆದಾರ ಕಾರ್ಮಿಕರು ತಮ್ಮ ಸಂಬಳವನ್ನು ಹೆಚ್ಚಿಸಿ, ಶಾಶ್ವತ ಉದ್ಯೋಗಿಗಳಾಗಿ ಖಾಯಂ ಮಾಡಲು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಖಾನೆ ಎದುರು ಎಐಟಿಯುಸಿ ನೇತೃತ್ವದಲ್ಲಿ ಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಪ್ರಿಕಾಟ್ ಲಿಮಿಟೆಡ್ ವರ್ಕರ್ಸ್ ಮತ್ತು ಎಂಪ್ಲಾಯೀಸ್ ಯೂನಿಯನ್‌ನ ಸಹ ಕಾರ್ಯದರ್ಶಿ ಜಿ.ಪಿ. ಪ್ರವೀಣ್ ಮಾಧ್ಯಮದೊಂದಿಗೆ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಸಂಸ್ಥೆಯಲ್ಲಿ ನಿರಂತರ ಸೇವೆ ನೀಡುತ್ತಿದ್ದರೂ, ನಮ್ಮ ಸಂಬಳದಲ್ಲಿ ಯಾವುದೇ ಗಣನೀಯ ಹೆಚ್ಚಳವಾಗಿಲ್ಲ ಎಂದರು.