ಮಂಗಳೂರು: ಸಿರಿಬಾಗಿಲಿನಲ್ಲಿ ಉಚಿತ ವೈದ್ಯಕೀಯ ಶಿಬಿರ: 100ಕ್ಕೂ ಹೆಚ್ಚು ಮಂದಿ ಭಾಗಿ
ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕೆ.ಎಂ.ಸಿ. ಅತ್ತಾವರ ಆಸ್ಪತ್ರೆ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಈ ಶಿಬಿರದಲ್ಲಿ 100ಕ್ಕೂ ಹೆಚ್ಚು ಮಂದಿ ತಪಾಸಣೆ ಮಾಡಿಸಿಕೊಂಡಿದ್ದು, ಸಕ್ಕರೆ ಕಾಯಿಲೆ ಮತ್ತು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಯಿತು.