ಶಿವಮೊಗ್ಗ: ಮೂಡಾ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ನಗರದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ ಮೇಘರಾಜ್
ಮೂಡ ಸೈಟು ಸಿಎಂ ಸಿದ್ದರಾಮಯ್ಯ ಅವರ ಪತ್ನಿಕೆ ನೀಡುವ ಬೇಳೆ ಎಲ್ಲಾ ಕಾನೂನು ಉಲ್ಲಂಘನೆ ನಡೆದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಆರೋಪಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಪ್ರೀಂ ಕೋರ್ಟ್ 2009ರ ನಂತರದ ಭೂಸ್ವಾಧೀನ ನಿಯಮವನ್ನು ಈ ಪ್ರಕರಣದಲ್ಲಿ ಉಲ್ಲಂಘಿಸಲಾಗಿದೆ ಕೂಡಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಟಿ ಡಿ ಮೇಘರಾಜ್ ಒತ್ತಾಯಿಸಿದರು.