ಹಳಿಯಾಳ : ತಾಲ್ಲೂಕಾಡಳಿತ, ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಅಭಿಯೋಜನಾ ಇಲಾಖೆ, ಕಂದಾಯ ಇಲಾಖೆ, ತಾಲೂಕು ಪಂಚಾಯತ್, ಪುರಸಭೆ, ಶಿಕ್ಷಣ ಇಲಾಖೆ ಮತ್ತು ವಿವಿಧ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಡಿ ಭಾನುವಾರ ಬೆಳಿಗ್ಗೆ 11 ಗಙಟೆ ಸುಮಾರಿಗೆ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಹಳಿಯಾಳದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ತಹಶೀಲ್ದಾರ್ ಫಿರೋಜ್ ಷಾ ಸೋಮನಕಟ್ಟಿ ಅವರು ಮತದಾನ ಅತ್ಯಂತ ಪವಿತ್ರವಾದ ಹಕ್ಕಾಗಿದ್ದು, ಅದನ್ನು ಪ್ರತಿಯೊಬ್ಬ ಮತದಾರರು ಚಲಾಯಿಸುವ ಮೂಲಕ ಈ ದೇಶದ ಸಂವಿಧಾನವನ್ನು ಗೌರವಿಸಬೇಕೆಂದು ಕರೆ ನೀಡಿದರು.