ಚಡಚಣ: ಭೀಮನಗೌಡ ಬಿರಾದಾರ ಹತ್ಯೆ ಆರೋಪಿಗಳನ್ನು ನೂರಕ್ಕೆ ನೂರರಷ್ಟು ಬಂಧಿಸುತ್ತವೆ ಪಟ್ಟಣದಲ್ಲಿ ಹೆಚ್ಚುವರಿ ಎಸ್ ಪಿ ರಾಮನಗೌಡ ಹಟ್ಟಿ ಹೇಳಿಕೆ
ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಭೀಮನಗೌಡ ಬಿರಾದಾರ್ ಹತ್ಯೆ ಮಾಡಿದ ಆರೋಪಿಗಳನ್ನು ನೂರಕ್ಕೆ ನೂರರಷ್ಟು ನಾವು ಬಂಧಿಸಿ ಭೀಮನಗೌಡ ಬಿರಾದರ್ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದು ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಶುಕ್ರವಾರ ಸಾಯಂಕಾಲ 7ಗಂಟೆ ಸುಮಾರಿಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಹೇಳಿದರು. ಪಟ್ಟಣದಲ್ಲಿ ಚಡಚಣ ಪಟ್ಟಣದ ಮುಖಂಡರೊಂದಿಗೆ ಸಭೆ ನಡೆಸಿ, ಹತ್ಯೆ ಮಾಡಿದ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸುತ್ತೇವೆ, ಕುಟುಂಬಸ್ಥರು ಸಹಕಾರ ನೀಡಬೇಕು ಎಂದು ಹೇಳಿದರು ಇನ್ನು ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು ಕುಟುಂಬಸ್ಥರು ಹಾಗೂ ಚಡಚಣ ಪಟ್ಟಣದ ಮುಖಂಡರುಗಳು ಭಾಗಿಯಾಗಿದ್ದರು.