ಶನಿವಾರ ರಾತ್ರಿ ಮೈಕೋ ಲೇಔಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಎಂಎಫ್ ಕಚೇರಿ ಮುಂದೆ ಗೂಡ್ಸ್ ವಾಹನವೊಂದು ಪಲ್ಟಿಯಾದ ಪರಿಣಾಮ, ಅದರಲ್ಲಿದ್ದ ಇಬ್ಬರಲ್ಲಿ ಒಬ್ಬ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ. ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ರಾತ್ರಿಯಿಡೀ ನರಳಾಡಿ ಪ್ರಾಣ ಬಿಟ್ಟಿದ್ದಾನೆ. ಸ್ಥಳೀಯರು ಗಾಯಾಳುವನ್ನು ಫುಟ್‌ಪಾತ್ ಮೇಲೆ ಕೂರಿಸಿ ತೆರಳಿದ್ದರು. ಗಾಯಾಳು ಪ್ರಜ್ಞೆ ಕಳೆದುಕೊಂಡಿದ್ದನ್ನು ನೋಡಿ ಭಯಗೊಂಡ ಚಾಲಕ ಪರಾರಿಯಾಗಿದ್ದಾನೆ. ಬೆಳಗ್ಗೆ ನೋಡಿದಾಗ ವ್ಯಕ್ತಿ ಮೃತಪಟ್ಟಿದ್ದಾನೆ.