ನರಗುಂದ: ಪಟ್ಟಣದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ 100ಕ್ಕೂ ಹೆಚ್ಚು ಬೈಕ್‌ಗಳು ಪೊಲೀಸರ ವಶಕ್ಕೆ, ಸಾರ್ವಜನಿಕರಿಗೆ ಟ್ರಾಫಿಕ್ ರೂಲ್ಸ್ ಬಗ್ಗೆ ಅರಿವು
Nargund, Gadag | Apr 4, 2025 ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಬಿ.ಎಸ್.ನೇಮಗೌಡ, ಐಪಿಎಸ್. ಅವರ ಮಾರ್ಗದರ್ಶನದಂತೆ ನರಗುಂದ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡು ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿದ 100ಕ್ಕೂ ಹೆಚ್ಚು ಅಧಿಕ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಲಾಗಿದೆ. ಈ ವೇಳೆ ರಸ್ತೆ ಸುರಕ್ಷತೆ ಹಾಗೂ ಸುರಕ್ಷಿತ ವಾಹನ ಸಂಚಾರದ ಬಗ್ಗೆ ಸೂಕ್ತ ತಿಳುವಳಿಕೆ ನೀಡುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.