ಮುಧೋಳ: ನಗರದಲ್ಲಿ ಸಂಭ್ರಮದಿಂದ ಜರುಗಿದ ಶಿಕ್ಷಕರ ದಿನಾಚರಣೆ, ಸಚಿವ ಆರ್.ಬಿ.ತಿಮ್ಮಾಪೂರ್ ಭಾಗಿ
ಬಾಗಲಕೋಟೆ ಜಿಲ್ಲೆಯ ಮುಧೋಳದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಶಿಕ್ಷಕರ ದಿನಾಚರಣೆಯನ್ನ ಸಂಭ್ರಮದಿಂದ ಆಚರಿಸಲಾಯಿತು. ಸಚಿವ ಆರ್.ಬಿ.ತಿಮ್ಮಾಪೂರ್ ಅವತು ಕಾರ್ಯಕ್ರಮವನ್ಮ ಉದ್ಘಾಟಿಸಿ ಶಿಕ್ಷಕರನ್ನು ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ್, ಲೋಕಾಪೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕಿವಡಿ, ಮುಧೋಳ ನಗರ ಕಾಂಗ್ರೆಸ್ ಘಟಕ ಅಧ್ಯಕ್ಷ ರಾಘು ಮೊಕಾಶಿ, ಉದಯ ಸಾರವಾಡ ಪಡತಾರೆ ವಕೀಲರು, ಮುಧೋಳ ಎಪಿಎಂಸಿ ಅಧ್ಯಕ್ಷ ಸಂಗಪ್ಪ ಇಮ್ಮನವರ್, ಬಾಗಲಕೋಟೆ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಪರಮಾನಂದ ಕುಟ್ಟರಟ್ಟಿ, ನಗರಸಭೆ ಅಧ್ಯಕ್ಷರಾದ ಸುನಂದಾ ತೇಲಿ, ಕಾಂಗ್ರೆಸ್ ಮುಖಂಡರಾದ ಮುದುಕಣ್ಣ ಅಂಬಿಗೇರ್, ಚಿನ್ನು ಅಂಬಿ ಸೇರಿ ಹಲವರು ಭಾಗಿ.