ದಾಂಡೇಲಿ: ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ
ದಾಂಡೇಲಿ : ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯು ದಾಂಡೇಲಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಮಂಗಳವಾರ ಬೆಳಿಗ್ಗೆ 11:00ಗೆ ಆರಂಭಗೊಂಡು ಮಧ್ಯಾಹ್ನ 1 ಗಂಟೆಯವರೆಗೂ ಜರುಗಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ವಾಸರೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಡಿಸೆಂಬರ್ ತಿಂಗಳ 13 ರಿಂದ 15 ರವರೆಗೆ ದಾಂಡೇಲಿಯ ಹಳೆ ನಗರಸಭೆಯ ಮೈದಾನದಲ್ಲಿ ನಡೆಯಲಿರುವ 25ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತಂತೆ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಯಿತು. ಸಭೆಯಲ್ಲಿ ಈ ಬಾರಿಯ ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಜರುಗಿತು.