ಚಾಮರಾಜನಗರ: ನಗರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನ ಅಂಗವಾಗಿ ಯಶಸ್ವಿಯಾಗಿ ನಡೆದ ಬೃಹತ್ ಆರೋಗ್ಯ ತಪಾಸಣೆ ಶಿಬಿರ
ಚಾಮರಾಜನಗರದ ಹಳೇ ಖಾಸಗಿ ಬಸ್ ನಿಲ್ದಾಣದ ಮಾರಿಗುಡಿ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ಬೃಹತ್ ಆರೋಗ್ಯ ತಪಾಸಣೆ ಶಿಬಿರ, ರಕ್ತದಾನ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾಜಿ ಸಚಿವರು ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಎನ್.ಮಹೇಶ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ದೇಶದಾದ್ಯಂತ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ.