ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಜಿನ್ನಾಪುರ ಗ್ರಾಮದ ಬಳಿ ಹಟ್ಟಿ ಚಿನ್ನದ ಗಡಿಯಲ್ಲಿ ಕೆಲಸ ಮುಗಿಸಿ ನೌಕರ ಮನೆಗೆ ಹಿಂದಿರುಗುತ್ತಿದ್ದ ವೇಳೆ ಲಾರಿಯೊಂದು ಡಿಕ್ಕಿ ಹೊಡೆದು ಮೈಮೇಲೆ ಹರಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ರಾತ್ರಿ ಕೆಲಸ ಮುಗಿಸಿ ಮುಗಿಸಿ ಮನೆಗೆ ತೆರಳುವ ವೇಳೆ ಜಿನ್ನಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಬೈಕ್ ನಲ್ಲಿ ಬರುತ್ತಿದ್ದ ತಿಪ್ಪಣ್ಣ ಎಸ್ ನಂದವಾಡಗಿ(34) ಲಾರಿ ಹರಿದು ಸ್ಥಳದಲ್ಲೆ ಮೃತಪಟ್ಟ ದುರ್ದೈವಿ. ಲಾರಿ ಚಾಲಕನ ನಿರ್ಲಕ್ಷವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.