ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಇವರ ವತಿಯಿಂದ ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗಾಗಿ ಜವಳಿ ಚಿತ್ರಕಲೆ, ಸಣ್ಣ ವ್ಯವಹಾರದ ಕುರಿತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬುಧವಾರ 5 ಗಂಟೆಗೆ ಪತ್ರಿಕಾ ಹೇಳಿಕೆ ನೀಡಿದ್ದು, ತರಬೇತಿಯು 31ದಿನ ನಡೆಯಲಿರೋ ತರಬೇತಿ ವೇಳೆ ಅಭ್ಯರ್ಥಿಗಳಿಗೆ ಉಚಿತ ಊಟ ಹಾಗೂ ಉಚಿತ ವಸತಿ ವ್ಯವಸ್ಥೆ ಇರುತ್ತದೆ. ಆಸಕ್ತರು 8ನೇ ತರಗತಿ ವ್ಯಾಸಂಗ ಮಾಡಿರುವ 18 ರಿಂದ 45 ವರ್ಷದೊಳಗಿನ ವಯಸ್ಸು ಹೊಂದಿರುವ ಗ್ರಾಮೀಣ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.