ಶಿವಮೊಗ್ಗ: ನಗರದಲ್ಲಿ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ; ಶಾಸಕ ಚನ್ನಬಸಪ್ಪ ಭಾಗಿ
ಶಿವಮೊಗ್ಗ ನಗರದ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಬುಧವಾರ ಮೀನುಗಾರಿಕೆ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿವಮೊಗ್ಗ ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಲಾಗಿದ್ದ, ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ ಕಾರ್ಯಕ್ರಮವನ್ನು ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನೀನು ಕೃಷಿಕರಿಗೆ ಉತ್ತೇಜನ ನೀಡುವಂತಹ ಅನೇಕ ವಿಷಯಗಳು ಕುರಿತು ಶಾಸಕರು ಮಾತನಾಡಿದರು.