ಬೀದರ್: ಭವಿಷ್ಯದ ಪೀಳಿಗೆಗೆ ಪರಿಸರ ಸಂರಕ್ಷಣೆ ಅತ್ಯಗತ್ಯ ; ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಖಂಡ್ರೆ
Bidar, Bidar | Oct 18, 2025 ಬೀದರ್ : ಭವಿಷ್ಯದ ಪೀಳಿಗೆಗೆ ಪರಿಸರ ಸಂರಕ್ಷಣೆ ಅತ್ಯಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ತಿಳಿಸಿದರು. ಶನಿವಾರ ಸಂಜೆ 4 ಗಂಟೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಗೊಂಡು 50 ವರ್ಷಗಳಾದ ಹಿನ್ನೆಲೆಯಲ್ಲಿ 'ಸುವರ್ಣ ಮಹೋತ್ಸವ ' ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.