ಕೆಂಭಾವಿಯಲ್ಲಿ ಅಕ್ರಮ ಅಕ್ಕಿ ಸಾಗಾಣಿಕೆ ಪ್ರಕರಣ ದಾಖಲು
=================
ಯಾದಗಿರಿ, ಅಕ್ಟೋಬರ್. 13 : ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ವಿತರಿಸಲಾಗುವ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಾಗಿದೆ.
ಖಚಿತ ಮಾಹಿತಿ ಮೇರೆಗೆ ಆಹಾರ ನಿರೀಕ್ಷಕರು ಸುರಪುರ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ. ಈ ವೇಳೆ ಟಾಟಾ ಎಸ್ ವಾಹನವನ್ನು (ಸಂಖ್ಯೆ: ಕೆಎ-33-ಎ-3225) ಪರಿಶೀಲಿಸಿದಾಗ, ವಾಹನದಲ್ಲಿ ಸುಮಾರು 15,080 ರೂಪಾಯಿ ಮೌಲ್ಯದ 6.50 ಕ್ವಿಂಟಲ್ ಅಕ್ಕಿ ಪತ್ತೆಯಾಗಿದೆ. ಈ ಸಂಬAಧ ದಿನಾಂಕ: 07-10-2026 ರಂದು ಕೆಂಭಾವಿ ಪೊಲೀಸ್ ಠಾಣೆಯಲ್ಲಿ ವಾಹನದ ಚಾಲಕ ಮತ್ತು ಮಾಲೀಕನ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ರ ಕಲಂ 3 ಮತ್ತು 7 ರಡಿ ಪ್ರಕರಣ (ಪ್ರಕರಣ ಸಂಖ್ಯೆ: 183/2026) ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
Yadgir, Yadgir | Oct 13, 2026