ಬೆಂಗಳೂರು ಉತ್ತರ: ಬೆಳಗ್ಗೆ ಇಡ್ಲಿ, ಮಧ್ಯಾಹ್ನ ನಾಟಿ ಕೋಳಿ, ಡಿನ್ನರ್ ಮೀಟಿಂಗ್ ಗೆ ಬೆಳ್ಳುಳ್ಳಿ ಕಬಾಬ್: ನಗರದಲ್ಲಿ ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ
ಕಾಂಗ್ರೆಸ್ ಸರ್ಕಾರದಲ್ಲಿ ಬಡವರಿಗೆ ಆರೋಗ್ಯ ಸೇವೆಗಳು ಸಿಗುತ್ತಿಲ್ಲ, ರಾಜ್ಯಾದ್ಯಂತ 7 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಮುಚ್ಚಿದ್ದು ಮಕ್ಕಳ ಶಿಕ್ಷಣಕ್ಕೆ ಆಪತ್ತು ಬಂದಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆರೋಪಿಸಿದರು. ಬೆಂಗಳೂರಿನ ಜೆ.ಪಿ ಭವನದಲ್ಲಿ ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಕೋರ್ ಕಮಿಟಿ ಸಭೆಯ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ಬ್ರೇಕ್ಫಾಸ್ಟ್, ಡಿನ್ನರ್ ಮೀಟಿಂಗ್ ಮಾಡ್ತಾ ಹೋದರೆ ಜನರಿಗೆ ಯಾವ ಸಂದೇಶ ಕೊಡ್ತೀರಾ? ಬ್ರೇಕ್ ಫಾಸ್ಟ್ಗೆ ಇಡ್ಲಿ, ಮಧ್ಯಾಹ್ನ ನಾಟಿ ಕೋಳಿ, ಡಿನ್ನರ್ಗೆ ಬೆಳ್ಳುಳ್ಳಿ ಕಬಾಬ್ ಬರುತ್ತೆನೋ ಎಂದು ವ್ಯಂಗ್ಯವಾಡಿದರು.