ಲಕ್ಷ್ಮೇಶ್ವರ: ಮೂರು ತಿಂಗಳಾದರೂ ಬಾರದ ಹಣ: ಪಟ್ಟಣದಲ್ಲಿ ಸಿಡಿದೆದ್ದ 'ಗೃಹಲಕ್ಷ್ಮಿ'ಯರು#locelissue
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ವಿರುದ್ಧ ಗದಗದಲ್ಲಿ ಮಹಿಳೆಯ ಗರಂ ಆಗಿದ್ದು, ಮೂರು ತಿಂಗಳಿಂದ ಹಣ ಬಂದಿಲ್ಲ ಎಂದು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ವಿರುದ್ಧ ಆಕ್ರೋಶ ಹೊರಹಾಕಿದ್ದು, ಗ್ಯಾರಂಟಿ ಯೋಜನೆಗಳನ್ನು ನೀಡಿ ಎಂದು ಯಾರೂ ಕೇಳಿಲ್ಲ. ಚುನಾವಣೆಯಲ್ಲಿ ಭರವಸೆ ನೀಡಿ ಮೋಸ ಮಾಡಿದ್ದಾರೆ ಆರೋಪಿಸಿದ್ದಾರೆ. ಚುನಾವಣೆಯಲ್ಲಿ ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್ ಸುಳ್ಳು ಭರವಸೆ ನೀಡಿದರು.