ಕಲಬುರಗಿ : ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರದ ಶಿವಶಕ್ತಿ ಬಡಾವಣೆಯಲ್ಲಿ ಡಿಸೆಂಬರ್ 29 ರಂದು ಬೆಳಗ್ಗೆ 11 ಗಂಟೆಗೆ ಸಂಭವಿಸಿದೆ.. ಖಂಡು ದವಲಸಾಬ್ ಎಂಬಾತ ತನ್ನದೇ ರಿವೋಲ್ವರ್ನಿಂದ ಮನೆಯಲ್ಲಿ ಯಾರು ಇಲ್ಲದ ವೇಳೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.. ಇನ್ನೂ ಆತ್ಮಹತ್ಯೆ ಮಾಡಿಕೊಂಡ ಖಂಡು, ದುಬೈನಲ್ಲಿ ಕ್ರೂಸ್ನಲ್ಲಿ ಕೆಲಸ ಮಾಡ್ತಿದ್ದನು. ರಜೆ ಮೇಲೆ ಕಲಬುರಗಿಗೆ ಬಂದಿದ್ದ ಖಂಡು, ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಡಿಸಿಪಿ ಹಾಗೂ ಚೌಕ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ