ದಾಂಡೇಲಿ : ನಗರದ ಮರಾಠಾ ಸಮಾಜ ಸಭಾ ಭವನದಲ್ಲಿ ಶಾಸಕ ಆರ್ ವಿ ದೇಶಪಾಂಡೆಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯು ಭಾನುವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಆರ್ ವಿ ದೇಶಪಾಂಡೆ ಅವರು ಕೇಂದ್ರ ಸರಕಾರದ ವೈಫಲ್ಯದಿಂದ ಜನ ಸಾಮಾನ್ಯರು ತೊಂದರೆ ಅನುಭವಿಸುತ್ತಿರುವುದು ಹಾಗೂ ಕೇಂದ್ರ ಸರಕಾರ ಕೊಟ್ಟ ಆಶ್ವಾಸನೆ ಈಡೇರಿಸದೆ ಇರುವ ಬಗ್ಗೆ ಜನ ಸಾಮಾನ್ಯರಿಗೆ ತಿಳಿಸಿ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡಲು ಕರೆ ನೀಡಿದರು. ಮುಂಬರುವ ಚುನಾವಣೆಯನ್ನು ಎದುರಿಸಲು ಸಕ್ರಿಯವಾಗಿ ಕೆಲಸ ಮಾಡಲು ಕರೆ ನೀಡಿದರು. ಎಲ್ಲ ಧರ್ಮದವರಿಗೆ, ದಿನ ದಲಿತರಿಗೆ, ಬಡಜನರಿಗೆ ನ್ಯಾಯ ಸಿಗಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂದರು.