ಅರ್ಕಲ್ಗುಡ್: ಅರಕಲಗೂಡಿನಲ್ಲಿ ವಿಜೃಂಭಣೆಯಿಂದ ನಡೆದ ಆಯುಧ ಪೂಜೆ: ಶಾಸಕ ಎ. ಮಂಜು ಭಾಗಿ
ಅರಕಲಗೂಡು ಪಟ್ಟಣ ಪಂಚಾಯಿತಿ ಆಯೋಜಿಸಿದ್ದ ಆಯುಧ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಎ. ಮಂಜು ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ನಾಡಿನ ಜನತೆಗೆ ವಿಜಯದಶಮಿಯ ಶುಭಾಶಯ ಕೋರಿದ ಅವರು, ಎಲ್ಲರ ಬಾಳಿನಲ್ಲಿ ಸುಖ, ಶಾಂತಿ ನೆಲೆಸಲಿ ಎಂದು ಪ್ರಾರ್ಥಿಸಿದರು. ಈ ವೇಳೆ ಅಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.