ಕಲಬುರಗಿ : ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್ ರವರ 69 ನೇ ಮಹಾಪರಿನಿರ್ವಾಣ ದಿನಾಚರಣೆ ಅಂಗವಾಗಿ ಕಲಬುರಗಿ ನಗರದಲ್ಲಿ ಜಿಲ್ಲಾಡಳಿತದಿಂದ ಮಹಾಪರಿನಿರ್ವಾಣ ದಿನಾಚರಣೆ ಆಚರಿಸಲಾಗಿದೆ.. ಡಿಸೆಂಬರ್ 6 ರಂದು ಬೆಳಗ್ಗೆ 9 ಗಂಟಗೆ ನಗರದ ಜಗತ್ ವೃತ್ತದಲ್ಲಿರೋ ಡಾ ಬಾಬಾ ಸಾಹೇಬ್ ಅಂಬೇಡ್ಕರ್ರ ಪುತ್ಥಳಿಗೆ ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್ ನೇತೃತ್ವದಲ್ಲಿ ನಮನ ಸಲ್ಲಿಸಲಾಯಿತು.. ಈ ವೇಳೆ ನಗರ ಪೊಲೀಸ್ ಆಯುಕ್ತ ಡಾ ಶರಣಪ್ಪ ಎಸ್.ಡಿ, ಎಸ್ಪಿ ಅಡ್ಡೂರು ಶ್ರೀನಿವಾಸುಲು ಸೇರಿದಂತೆ ಅನೇಕರು ಉಪಸ್ಥಿತರಿದ್ದರು..