ಸಿಂಧನೂರು: ರಾಯಚೂರುನಲ್ಲಿ ಅಕ್ಕ ಪಡೆ ಯೋಜನೆಗೆ ಅರ್ಜಿ ಆಹ್ವಾನ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಮಾಜ ಸೇವೆಯ ನಿಟ್ಟಿನಲ್ಲಿ ರೂಪಿಸಲಾದ ಅಕ್ಕ ಪಡೆ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ 05 ಮಹಿಳಾ ಎನ್ಸಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಕಷ್ಠದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವುದು ಅಕ್ಕ ಪಡೆ ಯೋಜನೆಯ ಪ್ರಾಥಮಿಕ ಉದ್ದೇಶವಾಗಿದೆ. ಸಹಾನುಭೂತಿ ಮತ್ತು ಸಮುದಾಯ ಸೇವೆಯಲ್ಲಿ ಚಾಲಿತವಾಗಿರುವ ಅಕ್ಕ ಪಡೆ ಸಮಾಜದಲ್ಲಿ ಸ್ಪಂದಿಸುವ ಸುರಕ್ಷತ ಘಟಕವಾಗಿ ಮತ್ತು ಶೈಕ್ಷಣಿಕ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ.