ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 6.50 ಕೋಟಿ ಅನುದಾನ ಬಿಡುಗಡೆ, ಸಚಿವ ಮಧುಬಂಗಾರಪ್ಪ ಮಾಹಿತಿ
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನ್ಯಾವಿಗೇಷನ್ ಉಪಕರಣ ಡಿವಿಓಆರ್ ಅಳವಡಿಕೆಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆಗೆ ಒಪ್ಪಿಗೆ ಸೂಚಿಸಿದೆ. 6.50 ಕೋಟಿ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ಲಭಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಸಂಬಂಧ ಸಚಿವ ಮಧು ಬಂಗಾರಪ್ಪ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬುಧವಾರ ಸಂಜೆ 6 ಗಂಟೆಗೆ ಮಾಹಿತಿ ಪ್ರಕಟಿಸಿದ್ದಾರೆ. ನೈಟ್ ಲ್ಯಾಂಡಿಂಗ್‌ಗೆ ಅನುಕೂಲವಾಗುವ ನ್ಯಾವಿಗೇಷನ್ ಉಪಕರಣವನ್ನು ತರಲಾಗಿದೆ. ಆದರು ರಾಜ್ಯ ಸರ್ಕಾರ ಅಳವಡಿಕೆಗೆ ಆಸಕ್ತಿ ತೋರಿಸಿಲ್ಲ ಎಂದು ಕಳೆದ ವಾರ ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದ್ದರು. ಇದಕ್ಕೆ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದರು.